ದ.ಕ. ಜಿಲ್ಲೆಯಲ್ಲಿ 14 ಮಂದಿಗೆ ಕೋವಿಡ್ ಪಾಸಿಟಿವ್ ; ಓರ್ವ ಬಲಿ
ಮಂಗಳೂರು, ಡಿ.7: ದ.ಕ.ಜಿಲ್ಲೆಯಲ್ಲಿ ಮಂಗಳವಾರ 14 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಒಬ್ಬರು ಮೃತಪಟ್ಟಿದ್ದಾರೆ. 18 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಪಾಸಿಟಿವ್ ದರ ಶೇ.0.25 ದಾಖಲಾಗಿದೆ.
ಜಿಲ್ಲೆಯಲ್ಲಿ ಈವರೆಗೆ 22,92,475 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 21,76,500 ನೆಗೆಟವ್ ಮತ್ತು 1,15,975 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,14,144 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1,698 ಮಂದಿ ಈವರೆಗೆ ಕೋವಿಡ್ಗೆ ಬಲಿಯಾಗಿದ್ದಾರೆ. ಸದ್ಯ 133 ಸಕ್ರಿಯ ಪ್ರಕರಣವಿದೆ.
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 89,663 ಪ್ರಕರಣ ದಾಖಲಿಸಿ, 1,08,60,270 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story