ಸೇನಾ ಹೆಲಿಕಾಪ್ಟರ್ ದುರಂತ; ಸುಪ್ರೀಂಕೋರ್ಟ್ ಹಿರಿಯ ನ್ಯಾಯಮೂರ್ತಿ ಮೂಲಕ ತನಿಖೆಗೆ ಸುಬ್ರಹ್ಮಣ್ಯನ್ ಸ್ವಾಮಿ ಆಗ್ರಹ
ಸುಬ್ರಹ್ಮಣ್ಯನ್ ಸ್ವಾಮಿ
ಉಡುಪಿ, ಡಿ.8: ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣದ ಬಗ್ಗೆ ಗಂಭೀರ ತನಿಖೆ ಆಗಬೇಕಾಗಿದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿ ಒತ್ತಾಯಿಸಿದ್ದಾರೆ.
ಉಡುಪಿ ಶ್ರೀಕೃಷ್ಣ ಮಠಕ್ಕೆ ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು.
ಈ ಪ್ರಕರಣದ ಕುರಿತು ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ರೀತಿಯ ತನಿಖೆಯಾಗಬೇಕು. ಕೇವಲ ಸಾಮಾನ್ಯ ತನಿಖೆ ನಡೆಸಿದರೆ ಪ್ರಯೋಜನವಿಲ್ಲ. ಸುಪ್ರೀಂಕೋರ್ಟ್ನ ಹಿರಿಯ ನ್ಯಾಯಮೂರ್ತಿ ಮೂಲಕ ತನಿಖೆ ನಡೆಸಬೇಕು ಎಂದರು. ಈ ಘಟನೆಯ ಕುರಿತು ಪ್ರಧಾನಿಗಳು ಜನರಿಗೆ ಸೂಕ್ತ ಮಾಹಿತಿ ನೀಡಬೇಕು. ದೇಶದ ಸುರಕ್ಷತೆಯ ದೃಷ್ಟಿಯಿಂದ ಇದೊಂದು ಗಂಭೀರ ಎಚ್ಚರಿಕೆಯಾಗಿದೆ. ಈ ಘಟನೆಯಿಂದ ನನಗೆ ಶಾಕ್ ಆಗಿದೆ. ಈಗ ತಾನೆ ಘಟನೆ ನಡೆದಿರುವುದರಿಂದ ಹೆಚ್ಚಿನ ಮಾಹಿತಿ ನನ್ನಲ್ಲಿ ಇಲ್ಲ ಎಂದು ಅವರು ಪ್ರತಿಕ್ರಿಯಿಸಿದರು.
Next Story