ಉಡುಪಿ : ಬುಧವಾರ ನಾಲ್ವರಿಗೆ ಕೋವಿಡ್ ಪಾಸಿಟಿವ್
ಉಡುಪಿ, ಡಿ.8: ಜಿಲ್ಲೆಯಲ್ಲಿ ಬುಧವಾರ ನಾಲ್ವರು ಕೊರೋನ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ ಎಂಟು ಮಂದಿ ಕೋವಿಡ್ನಿಂದ ಚೇತರಿಸಿ ಕೊಂಡಿದ್ದರೆ, ಇನ್ನೂ ಚಿಕಿತ್ಸೆಯಲ್ಲಿರುವವರ ಸಂಖ್ಯೆ 64 ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ದಿನದಲ್ಲಿ ಪಾಸಿಟಿವ್ ಬಂದ ನಾಲ್ವರು ಸಹ ಪುರುಷರಾಗಿದ್ದು, ಎಲ್ಲರೂ ಉಡುಪಿ ತಾಲೂಕಿನವರು. ಇವರಲ್ಲಿ ಇಬ್ಬರಿಗೆ ಆಸ್ಪತ್ರೆಯಲ್ಲಿ ಹಾಗೂ ಇನ್ನಿಬ್ಬರಿಗೆ ಅವರ ಮನೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಂಗಳವಾರ ಸೋಂಕಿನಿಂದ ಎಂಟು ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 76,404ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 2744 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,945ಕ್ಕೇರಿದೆ.
8608 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು 8608 ಮಂದಿ ಕೋವಿಡ್ ಲಸಿಕೆ ಸ್ವೀಕರಿಸಿದ್ದಾರೆ. ಇವರಲ್ಲಿ 1532 ಮಂದಿ ಮೊದಲ ಡೋಸ್ ಹಾಗೂ 7076 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 927 ಮಂದಿ ಮೊದಲ ಡೋಸ್ ಹಾಗೂ 4907 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 605 ಮಂದಿ ಮೊದಲ ಡೋಸ್ ಹಾಗೂ 2163 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಅಲ್ಲದೇ ನಾಲ್ವರು ಆರೋಗ್ಯ ಕಾರ್ಯಕರ್ತರು ಹಾಗೂ ಇಬ್ಬರು ಮುಂಚೂಣಿ ಕಾರ್ಯಕರ್ತರು ಸಹ ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.