ಗಾಂಜಾ ಸೇವನೆ: ಇಬ್ಬರು ವಶಕ್ಕೆ
ಕುಂದಾಪುರ, ಜ.9: ಗಾಂಜಾ ಸೇವನೆಗೆ ಸಂಬಂಧಿಸಿ ಇಬ್ಬರನ್ನು ಕುಂದಾಪುರ ಪೊಲೀಸರು ಬಸ್ರೂರು ಮೂರು ಕೈ ಬಳಿ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಡಿ.25ರಂದು ಕೋಟೇಶ್ವರ ಬಡಾಕೆರೆಯ ಕಾರ್ತಿಕ್ ವಿ.(24) ಹಾಗೂ ಮೊವಾಡಿಯ ಆದಿತ್ಯ(21) ಎಂಬವರನ್ನು ವಶಕ್ಕೆ ಪಡೆದು ಮಣಿಪಾಲ ಫೊರೆನ್ಸಿಕ್ ಮೆಡಿಸಿನ್ ವಿಭಾಗದ ಮುಂದೆ ಹಾಜರುಪಡಿಸಿದ್ದು, ಪರೀಕ್ಷಿಸಿದ ವೈದ್ಯರು ಇವರಿಬ್ಬರು ಗಾಂಜಾ ಸೇವಿಸಿರುವ ಬಗ್ಗೆ ದೃಢಪಟ್ಟಿರುವುದಾಗಿ ವರದಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story