ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಮಂಗಳೂರು, ಜ.17: ಮೆಟ್ರಿಕ್, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಎನ್ಎಸ್ಪಿ ಮೂಲಕ ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಕಡ್ಡಾಯವಾಗಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್ಎಸ್ಪಿ) ಮೂಲಕ ಆನ್ಲೈನ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನುssp.postmatric.karnataka.gov.in ಮೂಲಕ ಮಾರ್ಚ್ 31ರೊಳಗೆ ಸಲ್ಲಿಸಬೇಕು. ಎಸ್ಎಸ್ಪಿ ತಂತ್ರಾಂಶ ದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭ ಎನ್ಎಸ್ಪಿಯಲ್ಲಿ ಪಡೆದ ಐಡಿ ಸಂಖ್ಯೆ ಕಡ್ಡಾಯವಾಗಿರುತ್ತದೆ. ಎನ್ಎಸ್ಪಿ ಮೂಲಕ ಅರ್ಜಿ ಸಲ್ಲಿಸಿ ರಾಜ್ಯ ವಿದ್ಯಾರ್ಥಿ ವೇತನ ತಂತಾಂ್ರಶ (ಎಸ್ಎಸ್ಪಿ) ಮೂಲಕ ಅರ್ಜಿ ಸಲ್ಲಿಸದಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರಾಗುವುದಿಲ್ಲ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story