ಕೋಟೆಬಾಗಿಲಿನ ಶಾಲೆಯಲ್ಲಿ 17 ವಿದ್ಯಾರ್ಥಿಗಳಿಗೆ ಕೊರೋನ ಪಾಸಿಟಿವ್
ಭಟ್ಕಳ: ಶಿರಾಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟೆಬಾಗಿಲ್ ಸೆಂಟ್ ಥಾಮಸ್ ಶಾಲೆಯ 17 ವಿದ್ಯಾರ್ಥಿಗಳಿಗೆ ಕೊರೋನ ಸೋಂಕು ದೃಢಪಟ್ಟಿದ್ದು ಶಾಲಾ ಪರಿಸರವನ್ನು ಸೀಲ್ಡೌನ್ ಮಾಡಲಾಗಿದೆ.
ಈ ಕುರಿತಂತೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೋಗರ್ ಖಚಿತಪಡಿಸಿದ್ದು, ರವಿವಾರ ಒಂದೇ ದಿನ ಶಾಲೆಯ 17 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆದೇಶದಂತೆ ಶಾಲೆಯನ್ನು ಸೀಲ್ಡೌನ್ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ, ಕಂದಾಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಶಾಲೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಒಂದು ಶಾಲೆಯಲ್ಲಿ 5ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊರೋನ ಪಾಸಿಟಿವ್ ಆದಲ್ಲಿ ಆ ಶಾಲೆಗೆ ರಜೆ ಘೋಷಿಸಲಾಗುತ್ತಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳೇ ನಿರ್ಣಯ ಕೈಗೊಳ್ಳುತ್ತಾರೆ. ನಾವು ಜಿಲ್ಲಾಡಳಿತಕ್ಕೆ ವರದಿಯನ್ನು ನೀಡುತ್ತೇವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ.
ಕೋಟೆಬಾಗಿಲ ಮಜಿರೆಯಲ್ಲಿ ಓರ್ವ ನರ್ಸ್ ಸೇರಿದಂತೆ 4-5 ಜನರಿಗೆ ಕೊರೊನಾ ತಗುಲಿದ್ದು, ಸೆಂಟ್ ಥಾಮಸ್ ಶಾಲೆ ಪರಿಸರದ 100ಮೀ. ವ್ಯಾಪ್ತಿಯ ಪ್ರದೇಶದಲ್ಲಿ ನಿಬರ್ಂಧ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.