ಗುರುಪುರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ
ಮಂಗಳೂರು, ಜ.28: ವಾಮಂಜೂರು ಸಮೀಪದ ತಿರುವೈಲು ಗ್ರಾಮದ ತಾರಿಗುಡ್ಡೆ ನಿವಾಸಿ, ಗುರುಪುರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧಿಕಾರಿ ನಾಗರಾಜ ರಾವ್ (58) ಗುರುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬ್ಯಾಂಕ್ ವ್ಯವಹಾರಕ್ಕೆ ಸಂಬಂಧಿಸಿ ಮನನೊಂದು ಮನೆ ಸಮೀಪದ ತೋಟದ ಬಾವಿಯ ಬಳಿಯಿರುವ ಗೇಟ್ಗೆ ಹಗ್ಗ ಕಟ್ಟಿ ಕುತ್ತಿಗೆಗೆ ಬಿಗಿದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ನಾಗರಾಜ ಗುರುವಾರ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದನ್ನು ಕಂಡವರು ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರೆನ್ನಲಾಗಿದೆ.
ಮಂಗಳೂರು ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story