ಕಾರ್ಮಿಕ ಸಂಘಟನೆಗಳಿಂದ ರಾಷ್ಟ್ರವ್ಯಾಪಿ ಮುಷ್ಕರ; ಕಾಸರಗೋಡಿನಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಗಿತ
ಕಾಸರಗೋಡು : ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ರಾಷ್ಟ್ರೀಯ ಮುಷ್ಕರ ಕಾರಣ ಕಾಸರಗೋಡಿನಲ್ಲಿ ಬಸ್ಸು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಕೆಎಸ್ಸಾರ್ಟಿಸಿ, ಖಾಸಗಿ ಬಸ್ಸುಗಳು ರಸ್ತೆಗಿಳಿದಿಲ್ಲ. ಆಟೋ, ಟ್ಯಾಕ್ಸಿಗಳು ಬಹುತೇಕ ಮುಷ್ಕರದಲ್ಲಿ ಪಾಲ್ಗೊಂಡಿವೆ.
ಖಾಸಗಿ ವಾಹನಗಳು ಎಂದಿನಂತೆ ಸಂಚಾರ ನಡೆಸುತ್ತಿವೆ. ನಗರ ಪ್ರದೇಶಗಳಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಮುಚ್ಚಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಕೆಲವು ಅಂಗಡಿಗಳು ತೆರೆದಿದ್ದು ಬಸ್ಸುಗಳು ಹೊರತುಪಡಿಸಿ ಉಳಿದ ಕೆಲವು ವಾಹನಗಳು ಸಂಚಾರ ನಡೆಸುತ್ತಿವೆ.
Next Story