ಬೆಳಕೆ ಗ್ರಾಮೀಣ ವ್ಯವಸಾಯ ಸಹಕಾರಿ ಸಂಘದ ಕಚೇರಿಯ ನೂತನ ಕಟ್ಟಡದ ಉದ್ಘಾಟನೆ | Vartha Bharati- ವಾರ್ತಾ ಭಾರತಿ

--

ಬೆಳಕೆ ಗ್ರಾಮೀಣ ವ್ಯವಸಾಯ ಸಹಕಾರಿ ಸಂಘದ ಕಚೇರಿಯ ನೂತನ ಕಟ್ಟಡದ ಉದ್ಘಾಟನೆ

ಭಟ್ಕಳ: ಸಹಕಾರಿ ರಂಗದಲ್ಲಿ ಯಾವತ್ತೂ ರಾಜಕೀಯ ಪ್ರವೇಶ ಮಾಡಬಾರದು, ರಾಜಕೀಯ ಚುನಾವಣೆಗಷ್ಟೇ ಸೀಮಿತವಾಗಿರಬೇಕು ರಾಜ್ಯ ಸರಕಾರದ ಕಾರ್ಮಿಕ ಸಚಿವರು, ಕೆ.ಡಿ.ಸಿ.ಸಿ. ಬ್ಯಾಂಕ್‍ನ ಅಧ್ಯಕ್ಷರೂ ಆದ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಇಲ್ಲಿನ ಬೆಳಕೆಯಲ್ಲಿ ಬೆಳಕೆ ಗ್ರಾಮೀಣ ವ್ಯವಸಾಯ ಸಹಕಾರಿ ಸಂಘದ ಕಚೇರಿಯ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. 

ಸರಕಾರಿ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಕಡಿಮೆ ಇರಬೇಕು ಎನ್ನುವ ಉದ್ದೇಶದಿಂದಲೇ ಸರಕಾರ ವೈದ್ಯನಾಥ ವರದಿಯ ನಂತರ ಸರಕಾರಿ ಕ್ಷೇತ್ರ ಸ್ವತಂತ್ರ ಕಾರ್ಯನಿರ್ವಹಣೆಗೆ ಸರಕಾರ ಹೆಚ್ಚಿನ ಒತ್ತು ನೀಡಿದ್ದು ಇಂದು ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಬದಲಾವಣೆಗಳಾಗಿವೆ. 

ಉತ್ತರ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ಉತ್ತಮವಾಗಿ ಬೆಳೆದಿದ್ದು ಕೆ.ಡಿ.ಸಿ.ಸಿ. ಬ್ಯಾಂಕಿಗೆ 102 ವರ್ಷಗಳ ಇತಿಹಾಸ ಇದ್ದು ಜಿಲ್ಲೆಯ ಅನೇಕ ಧುರೀಣರು ಈ ಬ್ಯಾಂಕನ್ನು ಮುನ್ನಡೆಸಿದ್ದಾರೆ ಎಂದ ಅವರು ಜಿಲ್ಲೆಯ ಸಹಕಾರಿಗಳ ಸಹಕಾರವೂ ಕೂಡಾ ಕೆ.ಡಿ.ಸಿ.ಸಿ. ಬ್ಯಾಂಕಿನ ಬೆಳವಣಿಗೆಯಲ್ಲಿ ಮುಖ್ಯ ಪಾತ್ರ ವಹಿಸಿದೆ ಎಂದೂ ಹೇಳಿದರು. ಸಹಕಾರಿ ಕ್ಷೇತ್ರ ಉತ್ತಮವಾಗಿ ಬೆಳವಣಿಗೆಯನ್ನು ಹೊಂದುವುದಕ್ಕೆ ಬೆಳಕೆ ವ್ಯವಸಾಯ ಸೇವಾ ಸಹಕಾರಿ ಸಂಘವು ಒಂದು ಉತ್ತಮ ಉದಾಹರಣೆಯಾಗಿದ್ದು ಇದರ ಹಿಂದೆ ಇರುವ ಅನೇಕ ಶಕ್ತಿಗಳನ್ನು ಸ್ಮರಿಸಿದರಲ್ಲದೇ ಮಾಜಿ ಅಧ್ಯಕ್ಷರುಗಳು, ನಿರ್ದೇಶಕರುಗಳು, ಶೇರುದಾರರನ್ನು ಅಭಿನಂದಿಸಿದರು. 

ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಉಜಿರೆಯ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಪ್ರತಿಯೋರ್ವರೂ ಕೂಡಾ ಧರ್ಮವನ್ನು ಪಾಲಿಸಿದರೆ, ಅಲ್ಲಿ ಸುಖ, ಸಂತೋಷ, ಅಭಿವೃದ್ಧಿಯಿರುತ್ತದೆ. ಇದು ಒಂದು ಹಣಕಾಸು ಸಂಸ್ಥೆಯಾಗಿದ್ದು ಇಲ್ಲಿ ಹಣಕಾಸು ಧರ್ಮ ಪಾಲನೆ ಮುಖ್ಯವಾಗಿದೆ ಎಂದರು.

ಹಿಂದೆ ಖಾಸಗೀ ಬ್ಯಾಂಕುಗಳು ಉಳ್ಳವರ ಪಾಲಾಗಿದ್ದುದರಿಂದ ಕೇಂದ್ರ ಸರಕಾರ ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸಿ ಎಲ್ಲರ ಬ್ಯಾಂಕಾಗಿಸಿತು. ನಂತರದ ದಿನಗಳಲ್ಲಿ ಅತ್ಯಂತ ವೇಗವಾಗಿ ಬೆಳವಣಿಗೆ ಹೊಂದಿದ  ಸಹಕಾರಿ ಕ್ಷೇತ್ರದಿಂದಾಗಿ  ಜನ ಸಾಮಾನ್ಯರು ತಮ್ಮ ತುರ್ತು ಅವಶ್ಯಕತೆಗೆ ಸಹಕಾರಿ ಬ್ಯಾಂಕುಗಳನ್ನು ನಂಬುವಂತಾಗಿದೆ. ಜನಸಾಮಾನ್ಯರಿಗೆ ತುರ್ತು ಅವಶ್ಯಕತೆಗೆ ಸ್ಪಂಧಿಸುವ ಸಹಕಾರಿ ಸಂಘಗಳು ಎಲ್ಲಾ ರೀತಿಯ ಸೇವೆಯನ್ನು ನೀಡುವ ಮೂಲಕ ಜನರನ್ನು ತಲುಪಲು ಯಶಸ್ವೀಯಾಗಿವೆ. ಸಹಕಾರಿ ಸಂಸ್ಥೆಗಳು ಜನತೆಗೆ ಅಗತ್ಯತೆ ಇದ್ದಾಗ ತುರ್ತು ಸಹಾಯ ಮಾಡಬೇಕು, ಅಲ್ಲಿ ಯಾವುದೇ ಪಕ್ಷ, ಪಂಗಡಗಳನ್ನು ನೋಡದೇ ಅವರವರ ಅಗತ್ಯತೆಗಳನ್ನು ಗಮನಿಸಬೇಕು. ಪ್ರತಿಯೋರ್ವರೂ ಕೂಡಾ ತಮ್ಮ ಸಂಘಕ್ಕೆ ಬರುವ ಗ್ರಾಹಕರ ಗೌರವನ್ನು ಅವರ ಮನಸ್ಥಿತಿಯನ್ನು ಗೌರವದಿಂದ ಕಂಡಾ ಮಾತ್ರ ಸಂಸ್ಥೆ ಇನ್ನಷ್ಟು ಬೆಳೆಯುತ್ತದೆ ಎನ್ನುವುದಕ್ಕೆ ಈ ಸಂಸ್ಥೇ ಬೆಳೆದಿರುವುದೇ ಉದಾಹರಣೆಯಾಗಿದೆ ಎಂದ ಅವರು ಸಂಘ ತನ್ನ ಲಾಭದ ಒಂದು ಅಂಶವನ್ನು ರೈತರಿಗೆ, ಬಡವರ ಒಳಿತಿಗಾಗಿ ಬಳಸಬೇಕು ಎಂದೂ ಸ್ವಾಮೀಜಿಯವರು ಕರೆ ನೀಡಿದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಕೆ ಗ್ರಾಮೀಣ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಮಂಜುನಾಥ ಎಲ್. ನಾಯ್ಕ ವಹಿಸಿದ್ದರು. 

ವೇದಿಕೆಯಲ್ಲಿ ಶಾಸಕ ಸುನೀಲ ನಾಯ್ಕ, ಮಾಜಿ ಶಾಸಕ ಮಂಕಾಳ ವೈದ್ಯ, ಕೆ.ಡಿ.ಸಿ.ಸಿ. ಬ್ಯಾಂಕ್ ಉಪಾಧ್ಯಕ್ಷ ಮೋಹನದಾಸ ನಾಯ್ಕ, ಬೆಳಕೆ ಗ್ರಾ.ಪಂ ಅಧ್ಯಕ್ಷೆ ಶಾಂತಿ ಮೊಗೇರ, ಕುಮಟಾ ಸಹಕಾರ ಸಂಘಗಳ ಸಹಾಯಕ ನಿಬಂಧಕ ನಾಗಭೂಷಣ ಕಲ್ಮನೆ, ಉಪಾಧ್ಯಕ್ಷ ನಾರಾಯಣ ಜೆ. ನಾಯ್ಕ, ನಿರ್ದೇಶಕರಾದ ವಾಸು ನಾಯ್ಕ, ಕೃಷ್ಣ ಮೊಗೇರ, ಪಾಂಡುರಂಗ ನಾಯ್ಕ,  ದೇವಯ್ಯ ನಾಯ್ಕ, ದೇವಾನಂದ ಮೊಗೇರ, ರಮೇಶ ಗೊಂಡ, ಮಹಾದೇವ ನಾಯ್ಕ, ನಾಗೇಶ ನಾಯ್ಕ, ವೆಂಕಟೇಶ ನಾಯ್ಕ, ಲಲಿತಾ ನಾಯ್ಕ, ಜ್ಯೋತಿ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಈ ಹಿಂದೆ ಸುಧೀರ್ಘ ಸೇವೆ ಸಲ್ಲಿಸಿದ್ದ ದಿ. ಎಂ.ಎಸ್.ನಾಯ್ಕ ಬೆಳಕೆ ಅವರ ಹೆಸರಿನ ಸಭಾ ಭವನವನ್ನು ಸಹ ಉದ್ಘಾಟಿಸಲಾಯಿತು.  ಮಾಜಿ ಅಧ್ಯಕ್ಷರುಗಳು, ನಿರ್ದೇಶಕರುಗಳು ಹಾಗೂ ಹಾಲಿ ಅಧ್ಯಕ್ಷ ಮಂಜುನಾಥ ನಾಯ್ಕ, ಮುಖ್ಯ ಕಾರ್ಯನಿರ್ವಾಹಕ ಅಣ್ಣಪ್ಪ ನಾಯ್ಕ ಅವರನ್ನು ಸಹ ಸನ್ಮಾನಿಸಲಾಯಿತು. 

ಸಂಘದ ಅಧ್ಯಕ್ಷ ಮಂಜುನಾಥ ಲಚ್ಮಯ್ಯ ನಾಯ್ಕ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಾಹಕ ಅಣ್ಣಪ್ಪ ನಾಯ್ಕ ಸಂಘದ ವರದಿ ವಾಚಿಸಿದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top