ಮುಲ್ಕಿ: ಎಸೆಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಎಸ್ ಡಿಪಿಐಯಿಂದ ಸನ್ಮಾನ
ಮುಲ್ಕಿ, ಜೂ.6: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಎಲ್ಲ ಶಾಲೆಗಳ ವಿದ್ಯಾರ್ಥಿಗಳನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮುಲ್ಕಿ ಬ್ಲಾಕ್ ವತಿಯಿಂದ ರವಿವಾರ ಸನ್ಮಾನಿಸಿ, ಗೌರವಿಸಲಾಯಿತು.
ಮುಲ್ಕಿಯ ಹೋಟೆಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ವುಮೆನ್ಸ್ ಇಂಡಿಯಾ ಮೂವ್ ಮೆಂಟ್ ನ ರಾಷ್ಟ್ರೀಯ ಕಾರ್ಯದರ್ಶಿ ಆಯಿಷಾ ಉದ್ಘಾಟಿಸಿದರು.
ಪ್ರಾಸ್ತಾವಿಕ ಮಾತನಾಡಿದ ಎಸ್ ಡಿಪಿಐ ಮುಲ್ಕಿ ನಗರಾಧ್ಯಕ್ಷ ಕೆ.ಎ.ಇಬ್ರಾಹೀಂ, 'ಮೌಲ್ಯಾಧಾರಿತ ಶಿಕ್ಷಣ' ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅಲ್ಲದೆ, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು.
ಮುಲ್ಕಿ ಬ್ಲಾಕ್ ನ ಪ್ರಧಾನ ಕಾರ್ಯದರ್ಶಿ ಯು.ಕೆ. ಸಿದ್ದೀಕ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಎಸ್ ಡಿಪಿಐ ದ.ಕ. ಜಿಲ್ಲಾ ಉಪಾಧ್ಯಕ್ಷೆ ಮಿಸ್ರಿಯಾ, ಮುಲ್ಕಿ- ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷ ನಿಸಾರ್ ಉಪಸ್ಥಿತರಿದ್ದರು.
Next Story