ಎಸೆಸೆಲ್ಸಿ ಪೂರಕ ಪರೀಕ್ಷೆಗೆ ನಿಷೇಧಾಜ್ಞೆ ಜಾರಿ
ಉಡುಪಿ : ಪ್ರಸಕ್ತ ಸಾಲಿನ ಎಸೆಸೆಲ್ಸಿ ಪೂರಕ ಪರೀಕ್ಷೆಗಳು ಜೂನ್ ೨೭ರಿಂದ ಜುಲೈ ೪ರವರೆಗೆ ಜಿಲ್ಲೆಯ ೭ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳನ್ನು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗಧಿ ಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ೧೪೪(೧) ರಂತೆ ನಿಷೇಧಾಜ್ಷೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.
Next Story