ಕಾಸರಗೋಡು : ಬಸ್ಸಿನಲ್ಲಿ ಸಾಗಾಟ ಮಾಡುತ್ತಿದ್ದ ನಿಷೇಧಿತ ಪಾನ್ಮಸಾಲ ಸಹಿತ ಓರ್ವ ಸೆರೆ
ಕಾಸರಗೋಡು : ಬಸ್ಸಿನಲ್ಲಿ ಸಾಗಾಟ ಮಾಡುತ್ತಿದ್ದ ನಿಷೇಧಿತ ಪಾನ್ಮಸಾಲ ಸಹಿತ ಓರ್ವನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡು ಆಲಂಪಾಡಿಯ ಗಫೂರ್ (38) ಬಂಧಿತ ಆರೋಪಿ.
ಕುಂದಾಪುರದಿಂದ ಎರ್ನಾಕುಲಂ ಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪಾನ್ಮಸಾಲ ಸಾಗಾಟ ಮಾಡಲಾಗುತ್ತಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವೈಭವ್ ಸಕ್ಸೇನಾರಿಗೆ ಲಭಿಸಿದ ಖಚಿತ ಮಾಹಿತಿಯಂತೆ ನಗರದ ಹೊಸ ಬಸ್ಸು ನಿಲ್ದಾಣ ಪರಿಸರದಲ್ಲಿ ತಪಾಸಣೆ ನಡೆಸಿದಾಗ ಅಕ್ರಮ ಸಾಗಾಟ ಪತ್ತೆಯಾಗಿದೆ. ಬಸ್ಸಿನ ಲಗೇಜ್ ಬಾಕ್ಸ್ ನಲ್ಲಿ ಗೋಣಿ ಚೀಲದಲ್ಲಿ ತುಂಬಿಸಿ ಸಾಗಾಟ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story