ಶಾಲೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಚಿತ್ರಕಲಾ ಶಿಕ್ಷಕ
ಮಲ್ಪೆ : ಕರ್ತವ್ಯ ನಿರ್ವಹಿಸುತ್ತಿದ್ದ ಕಲ್ಯಾಣಪುರದ ಮೌಂಟ್ ರೋಸರಿಯೋ ಇಂಗ್ಲೀಷ್ ಮೀಡಿಯಂ ಶಾಲೆಯ ಚಿತ್ರಕಲಾ ಶಿಕ್ಷಕರು, ಹೃದಯಾಘಾತದಿಂದ ಪ್ರಾಂಶುಪಾಲರ ಕೊಠಡಿಯಲ್ಲಿಯೇ ಕುಸಿದು ಬಿದ್ದು ಮೃತಪಟ್ಟ ಘಟನೆ ಜೂ.೨೪ರಂದು ನಡೆದಿದೆ.
ಮೃತರನ್ನು ಹಾವೇರಿಯ ನಿವಾಸಿ ಆನಂದ ಗಂಧದ(೪೪) ಎಂದು ಗುರುತಿಸಲಾಗಿದೆ. ಇವರು ಸುಮಾರು ಎಂಟು ವರ್ಷಗಳಿಂದ ಈ ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಬೆಳಗ್ಗೆ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆನಂದ್, ಪ್ರಾಂಶು ಪಾಲರ ರೂಮಿಗೆ ಹೋಗಿದ್ದರು.
ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಅವರು, ಅಲ್ಲೆ ಕುಸಿದು ಬಿದ್ದರೆನ್ನ ಲಾಗಿದೆ. ತಕ್ಷಣ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋದ ಇವರನ್ನು ಮಧ್ಯಾಹ್ನ ೨ಗಂಟೆಗೆ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story