ಕಾಸರಗೋಡು ಸ್ಪೆಷಲ್ ಬ್ರಾಂಚ್ ಎಎಸ್ಐ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ
ಕಾಸರಗೋಡು : ಕಾಸರಗೋಡು ಸ್ಪೆಷಲ್ ಬ್ರಾಂಚ್ ಎಎಸ್ಐ ಅವರು ಮೃತಪಟ್ಟ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿದ್ದಾರೆ.
ಅಬ್ದುಲ್ ಅಝೀಝ್ (48) ಮೃತಪಟ್ಟವರು. ಅವರು ರಾಜಪುರ, ವೆಳ್ಳರಿಕುಂಡು ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ವೆಳ್ಳರಿಕುಂಡುನಲ್ಲಿರುವ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಾವಿಗೆ ಕಾರಣ ಸ್ಪಷ್ಟಗೊಂಡಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಮಹಜರು ನಡೆಸಿ ಮರಣೋತ್ತರ ಪರೀಕ್ಷೆಗಾಗಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.
Next Story