ಜುಲೈ 5ರಂದು ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ರಜೆ: ಡಿಸಿ ಭಂಡಾರಿ ಸ್ವಾಗತ್
ಕಾಸರಗೋಡು : ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ಮಂಗಳವಾರ (ಜುಲೈ 5) ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ.
ಅಂಗನವಾಡಿ ಹಾಗೂ ಕೇಂದ್ರೀಯ ವಿದ್ಯಾಲಯಗಳಿಗೂ ರಜೆ ಅನ್ವಯವಾಗಲಿದೆ. ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿವೆ. ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಆರಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story