ಭಟ್ಕಳ; ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿಯಾದ ಕಾರು: ಚಾಲಕ ಮೃತ್ಯು
ಭಟ್ಕಳ: ಮಂಗಳೂರಿನಿಂದ ಭಟ್ಕಳಕ್ಕೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಸೇತುವೆಗೆ ಢಿಕ್ಕಿಯಾಗಿ ಚಾಲಕ ಮೃತಪಟ್ಟ ಘಟನೆ ಭಟ್ಕಳ ತಾಲೂಕಿನ ಬೆಳಕೆ ಪಂಚಾಯತ್ ವ್ಯಾಪ್ತಿಯ ರಾ.ಹೆ.66ರಲ್ಲಿ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಜೊಸೆಫ್ ಜಾರ್ಜ್ (46) ಎಂದು ಗುರುತಿಲಾಗಿದ್ದು, ಕಾರಿನಲ್ಲಿದ್ದ ಇವರ ಪುತ್ರಿ ಮರಿಯಾ ಜೋಸೆಫ್ (16) ಸಣ್ಣಪುಟ್ಟ ಗಾಯಗಳಾಗಿದ್ದು ಭಟ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಮೃತ ಜೋಸೆಫ್ ಅವರ ಪುತ್ರಿ ನೀಟ್ ಪರೀಕ್ಷೆಗಾಗಿ ಮಂಗಳೂರಿಗೆ ಹೋಗಿ ಹಿಂದಿರುಗುತ್ತಿದ್ದ ವೇಳೆ ಭಾರೀ ಮಳೆಯಿಂದ ಬೆಳಕೆ ಸೇತುವೆಯ ಹತ್ತಿರ ದನವೊಂದು ಅಡ್ಡಬಂದ ಪರಿಣಾಮ ತಪ್ಪಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Next Story