ಪ್ರವಾಹ ಪೀಡಿತ ಭಟ್ಕಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ; ಮೃತರ ಕುಟುಂಬಸ್ಥರಿಗೆ ಪರಿಹಾರದ ಚೆಕ್ ವಿತರಣೆ
ಭಟ್ಕಳ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರವಾಹ ಪೀಡಿತ ಭಟ್ಕಳ ತಾಲ್ಲೂಕಿನ ಮುಟ್ಟಲು ಗ್ರಾಮದಲ್ಲಿ ಗುಡ್ಡ ಕುಸಿತದಿಂದ 4 ಜನ ಸಾವು ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತರ ಕುಟುಂಬಸ್ಥರಿಗೆ ಪರಿಹಾರದ ಚೆಕ್ ವಿತರಣೆ ಮಾಡಿದರು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಟ್ಕಳದಲ್ಲಿ ನೆರೆ ಪೀಡಿತ ಸ್ಥಳಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಕಂದಾಯ ಸಚಿವರಾದ ಆರ್ ಅಶೋಕ್, ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್, ಭಟ್ಕಳ ಶಾಸಕರಾದ ಸುನಿಲ್ ನಾಯ್ಕ್, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರಾದ ರೂಪಾಲಿ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಗಣಪತಿ ಉಳ್ವೇಕರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಸಿಇಒ ಪ್ರಿಯಾಂಕ, ಎಸ್ ಪಿ ಸುಮನ್ ಪೆನ್ನೇಕರ್ ಹಾಗು ಇತರರು ಉಪಸ್ಥಿತರಿದ್ದರು.