ಉಪ್ಪಿನಂಗಡಿ: ಕಳವು ಪ್ರಕರಣ; ಆರೋಪಿ ಸೆರೆ
ಉಪ್ಪಿನಂಗಡಿ: ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಗುರುವಾರ ರಾತ್ರಿ ನಡೆದಿದ್ದ ಕಳವು ಹಾಗೂ ಕಳ್ಳತನ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಪ್ಪಿನಂಗಡಿ ಠಾಣಾ ಉಪನಿರೀಕ್ಷಕ ರಾಜೇಶ್ ಕೆ.ವಿ. ನೇತೃತ್ವದ ಪೊಲೀಸರ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಶ್ರಫ್ (37) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಕಲ್ಲೇರಿಯ ಕ್ಲಿನಿಕ್ನಲ್ಲಿ ಕಳವು ಮಾಡಿ, ಮೂರ್ತೆದಾರರ ಸಹಕಾರಿ ಸಂಘದ ಬಾಗಿಲು ಮುರಿಯಲು ಯತ್ನಿಸಿದ ಘಟನೆ ಶುಕ್ರವಾರ ಬೆಳಕಿಗೆ ಬಂದಿತ್ತು. ಈ ಬಗ್ಗೆ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರ ತಂಡ ಅಗತ್ಯ ಮಾಹಿತಿಯನ್ನು ಕಲೆ ಹಾಕಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ನಿವಾಸಿಯಾಗಿದ್ದು, ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನದ ಪ್ರಕರಣದಲ್ಲೂ ಆರೋಪಿಯಾಗಿರುತ್ತಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story