ಚಾರ್ಮಾಡಿ ಘಾಟಿಯಲ್ಲಿ ಮರಬಿದ್ದು ಸಂಚಾರಕ್ಕೆ ಅಡ್ಡಿ: ಗಂಟೆ ಕಾಲ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಆ್ಯಂಬುಲೆನ್ಸ್
ಬೆಳ್ತಂಗಡಿ, ಸೆ.12: ಮಲೆನಾಡಿನಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಇಂದು ಬೆಳಗ್ಗೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಾಹನಗಳ ಸಂಚಾರಕ್ಕೆ ಅಡಚಣೆಯುಂಟಾಗಿತ್ತು.
ಈ ವೇಳೆ ಆ್ಯಂಬುಲೆನ್ಸ್ ವೊಂದು ಕೂಡಾ ಟ್ರಾಫಿಕ್ ಜಾಮ್ ನಲ್ಲಿ ಸುಮಾರು ಒಂದು ಗಂಟೆ ಕಾಲ ಸಿಲುಕಿತ್ತು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ರವಿವಾರ ಲಾರಿ- ಮತ್ತು ಸರಕಾರಿ ಬಸ್ ನಡುವೆ ಅಪಘಾತ ಸಂಭವಿಸಿದ್ದರಿಂದ ಘಾಟಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಇದನ್ನೂ ಓದಿ: ಉಕ್ರೇನ್ ಯುದ್ಧದಲ್ಲಿ ಹಿನ್ನಡೆ: ರಷ್ಯಾದಲ್ಲಿ ವ್ಯಾಪಕ ಆಕ್ರೋಶ
Next Story