ಪುತ್ತೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ
ಪುತ್ತೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆ ಯನ್ನು ಶನಿವಾರ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಸಲಾಯಿತು.
ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಅವರು ಇಂದಿರಾ ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿ ಅವರು ಪ್ರಧಾನಿಯಾಗಿ ಈ ದೇಶದ ಬಡವರ ಅಭಿವೃದ್ಧಿಗಾಗಿ ತಂದ ಕಾರ್ಯಕ್ರಮವನ್ನು ನೆನಪಿಸಿಕೊಂಡರು,
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಅಲಿ,ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನೇಶ್ ಪಿ ವಿ, ಕಚೇರಿ ಕಾರ್ಯದರ್ಶಿ ಸಿರಿಲ್ ರೋಡ್ರಿಗಸ್, ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕ ಅಧ್ಯಕ್ಷ ಶರೊನ್ ಸಿಕ್ವೆರಾ,ಬ್ಲಾಕ್ ಎಸ್ ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್, ನಗರ ಕಾಂಗ್ರೆಸ್ ಉಪಾಧ್ಯಕ್ಷ ಮುಕೇಶ್ ಕೆಮ್ಮಿಂಜೆ, ಪ್ರದಾನ ಕಾರ್ಯದರ್ಶಿ ವಿಕ್ಟರ್ ಪಾಯ್ಸ್, ಬ್ಲಾಕ್ ಹಿಂದುಳಿದ ವರ್ಗದ ಪ್ರದಾನ ಕಾರ್ಯದರ್ಶಿ ಕಲಾವಿದ ಕೃಷ್ಣಪ್ಪ, ಅರ್ಯಾಪು ಪಂಚಾಯತ್ ಸದಸ್ಯ ಯಾಕೂಬು ಕುರಿಯ, ಕಾಂಗ್ರೆಸ್ ಮುಖಂಡ ಸಂತೋಷ ಕುಮಾರ್ ಮುರ ಮತ್ತಿತರರು ಉಪಸ್ಥಿತರಿದ್ದರು.