ಉಡುಪಿ: ವೃದ್ಧ ನಾಪತ್ತೆ
ಉಡುಪಿ, ನ.16: ತಾಲೂಕಿನ ಮೂಡನಿಡಂಬೂರು ಗ್ರಾಮದ ಕಿತ್ತೂರು ಚೆನ್ನಮ್ಮ ರಸ್ತೆಯ ನಿವಾಸಿ ರವೀಂದ್ರ ಜೋಗಿ ಎಂಬವರ ಸಹೋದರ ಶ್ರೀಧರ ಜೋಗಿ(60) ಎಂಬವರು ನ.13ರಿಂದ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀಧರ್ ಜೋಗಿ 5.7 ಅಡಿ ಎತ್ತರವಿದ್ದು, ಗೋಧಿ ಮೈಬಣ್ಣ, ಸಾಧಾರಣ ಶರೀರ, ಕೋಲು ಮುಖ, ಬಿಳಿ ಕೆಂಚು ಮಿಶ್ರಿತ ತಲೆಕೂದಲು ಹೊಂದಿದ್ದಾರೆ. ಬಿಳಿ ಮತ್ತು ಗುಲಾಬಿ ಬಣ್ಣ ಮಿಶ್ರಿತ ಉದ್ದ ತೋಳಿನ ಅಂಗಿ ಹಾಗೂ ಕಂದು ಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಕನ್ನಡ-ತುಳು ಭಾಷೆ ಬಲ್ಲವರಾಗಿದ್ದಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.
Next Story