ಯುವಕ ಆತ್ಮಹತ್ಯೆ
ಬೆಳ್ತಂಗಡಿ, ಮಾ.9: ಕೊಯ್ಯೂರು ಗ್ರಾಮದ ತಾರೆದಡಿ ನಿವಾಸಿ ಯೋಗೀಶ್ ಬಂಗೇರ(28) ಎಂಬವರು ಬುಧವಾರ ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷ ಸೇವಿಸಿ ತೀವ್ರವಾಗಿ ಅಸ್ವಸ್ಥರಾಗಿದ್ದ ಯೋಗೀಶ್ರನ್ನು ಮನೆಯವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ಮೃತಪಟ್ಟಿದ್ದಾರೆ. ಮೃತರ ಸಹೋದರ ಗಣೇಶ್ ನೀಡಿರುವ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story