ನಾಳೆಯಿಂದ ದ.ಕ. ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನ
ಮಂಗಳೂರು, ಮಾ.24: ಕರಾವಳಿ ಲೇಖಕಿಯರ ವಾಚಕಿಯರ ಸಂಘ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ದ.ಕ. ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನ ಮಾ.25 ಮತ್ತು 26ರಂದು ತುಳು ಭವನದಲ್ಲಿ ನಡೆಯಲಿದೆ.
ಬಿ.ಎಂ.ರೋಹಿಣಿ ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದು, ಮಾ.25ರಂದು ಬೆಳಗ್ಗೆ 9:30ಕ್ಕೆ ಉದ್ಘಾಟನೆ ನೆರವೇರಲಿದೆ. ಕನ್ನಡ ತುಳು ಲೇಖಕಿ ಮುಂಬೈನ ಡಾ. ಸುನೀತಾ ಎಂ.ಶೆಟ್ಟಿ ಉದ್ಘಾಟಿಸಲಿದ್ದಾರೆ. ಮಾ.26ರಂದು ಅಪರಾಹ್ನ 3ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story