ಬಿಸಿಎಫ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಮಂಗಳೂರು,ಆ.3: ಬ್ಯಾರೀಸ್ ಕಲ್ಚರಲ್ ಫೋರಮ್ ದುಬೈ, ಯು.ಎ.ಇ, ಪ್ರತೀ ವರ್ಷದಂತೆ ಈ ಬಾರಿಯೂ ಮದ್ರಸ, ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡುವ ಸಲುವಾಗಿ ಅರ್ಜಿಯನ್ನು ಆಹ್ವಾನಿಸಿದೆ. 5, 7, 10 ಮತ್ತು 12 ತರಗತಿಗಳಿಗೆ ಮದ್ರಸ ಬೋರ್ಡು ನಡೆಸಿದ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಮದ್ರಸ ವಿದ್ಯಾರ್ಥಿಗಳು ಹಾಗೂ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ (ಕಲಾ, ವಾಣಿಜ್ಯ ಮತ್ತು ವಿಜ್ಞಾನ) ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಎಲ್ಲಾ ಸಮುದಾಯದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಗಳು ಸ್ವ ವಿವರವುಳ್ಳ ಅರ್ಜಿಯೊಂದಿಗೆ ದೃಢೀಕೃತ ಅಂಕಪಟ್ಟಿಯನ್ನು ಲಗತ್ತಿಸಿ ‘ಇ ಮೇಲ್’ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 08.08.2017. ಬಂದ ಅರ್ಜಿಗಳಲ್ಲಿ ಮಾತ್ರ ಅತೀ ಹೆಚ್ಚು ಅಂಕ ಪಡೆದವರನ್ನು ಪ್ರತಿಭಾ ಪುರಸ್ಕಾರಕ್ಕೆ ಪರಿಗಣಿಸಲಾಗುವುದು. ಆದುದರಿಂದ ಪ್ರತಿಭಾವಂತ ವಿದ್ಯಾರ್ಥಿಗಳು ಈ ಅಪೂರ್ವ ಅವಕಾಶವನ್ನು ಸದುಪಯೋಗಪಡಿಸುವಂತೆ ಬಿಸಿಎಫ್ ಉಪಾಧ್ಯಕ್ಷ ಹಾಗೂ ಸ್ಕಾಲರ್ಶಿಪ್ ಕಮಿಟಿಯ ಅಧ್ಯಕ್ಷ ಎಂ.ಇ ಮೂಳೂರು ಪತ್ರಿಕಾ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.
ಇ ಮೇಲ್ ವಿಳಾಸ: bcfaward2017@gmail.com ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ: 9844773906