ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆರ್ಜಿ ಆಹ್ವಾನ
ಉಡುಪಿ, ಆ.5: ತಾಲೂಕಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಕಲಿಯುತ್ತಿರುವ ಶಾಲಾ/ಕಾಲೇಜುಗಳ ಮುಖ್ಯಸ್ಥ ರಿಂದ ಸಂಬಂಧಿಸಿದ ದಾಖಲೆಗಳೊಂದಿಗೆ ನೇರವಾಗಿ ಇಲಾಖೆಯ ವೆಬ್ಸೈಟ್ -www.sw.kar.nic-ಗೆ ಲಾಗ್ಇನ್ ಆಗಿ ಸಂಪೂರ್ಣ ಮಾಹಿತಿಯನ್ನು (ಆಧಾರ್ ಕಾರ್ಡ್, ಬ್ಯಾಂಕ್ ಖಾತೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ) ನೀಡಿ ಕಡ್ಡಾಯವಾಗಿ ಆನ್ಲೈನ್ನಲ್ಲಿ ಅರ್ಜಿಗಳನ್ನು ದಾಖಲಿಸಬೇಕು. ಇದರ ದೃಢೀಕೃತ ಪ್ರತಿಯೊಂದಿಗೆ ಕಾಲೇಜು ಮುಖಾಂತರ ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ತಾಲೂಕು ಪಂಚಾಯತ್ ಆವರಣ, ಉಡುಪಿ ಇಲ್ಲಿಗೆ ಆ.31ರೊಳಗೆ ಸಲ್ಲಿಸಬೇಕು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 0820-2528884ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.
Next Story