Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಜಾತಿ ಆಧಾರಿತ ರಾಜಕಾರಣಕ್ಕೆ ವಿರೋಧ:...

​ಜಾತಿ ಆಧಾರಿತ ರಾಜಕಾರಣಕ್ಕೆ ವಿರೋಧ: ಜ.21 ರಂದು ಪಾದಯಾತ್ರೆ

ವಾರ್ತಾಭಾರತಿವಾರ್ತಾಭಾರತಿ18 Jan 2018 4:32 PM IST
share
​ಜಾತಿ ಆಧಾರಿತ ರಾಜಕಾರಣಕ್ಕೆ ವಿರೋಧ: ಜ.21 ರಂದು ಪಾದಯಾತ್ರೆ

ಮಡಿಕೇರಿ, ಜ.18 :ಇತ್ತೀಚಿನ ದಿನಗಳಲ್ಲಿ ಕೊಡಗಿನ ಅಭಿವೃದ್ಧಿಗೆ ಮಾರಕವಾಗುವ ರೀತಿಯಲ್ಲಿ ಜಾತಿ ಆಧಾರಿತ ರಾಜಕೀಯ ನಡೆಯುತ್ತಿದೆ ಎಂದು ಜನಪರ ಹೋರಾಟ ಸಮಿತಿಯ ಸಂಚಾಲಕರಾದ ಬಲ್ಲಾರಂಡ ಮಣಿ ಉತ್ತಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಾತಿ ಆಧಾರದಲ್ಲಿ ಟಿಕೆಟ್ ಬೇಡಿಕೆ ಇಡುವುದರ ವಿರುದ್ಧ ಜನ ಜಾಗೃತಿ ಮೂಡಿಸಲು ಜ.21 ರಂದು ತಲಕಾವೇರಿಯಿಂದ ಮಡಿಕೇರಿಯ ಶ್ರೀಓಂಕಾರೇಶ್ವರ ದೇವಸ್ಥಾನದವರೆಗೆ ಪಾದಯಾತ್ರೆ ನಡೆಸುವುದಾಗಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವೆಲ್ಲರು ಭಾರತೀಯರು ಎನ್ನುವ ಮನೋಭಾವನೆಯನ್ನು ಸೃಷ್ಟಿಸುವ ಅಗತ್ಯವಿದ್ದು, ಇದಕ್ಕೆ ಅಡ್ಡಿಯಾಗಿರುವ ಜಾತಿ ಆಧಾರಿತ ರಾಜಕಾರಣಕ್ಕೆ ಕಡಿವಾಣ ಹಾಕುವ ಅನಿವಾರ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.

ಕೊಡಗಿನಲ್ಲಿ ಕೇವಲ ಕೊಡವ ಹಾಗೂ ಗೌಡ ಜನಾಂಗದವರು ಚುನಾವಣೆಗೆ ಟಿಕೆಟ್ ಪಡೆಯಬೇಕೆನ್ನುವ ಬಯಕೆ ಅರ್ಥಹೀನವೆಂದ ಅವರು ರಾಜಕೀಯ ಪಕ್ಷಗಳು ಜನರ ಆಶೋತ್ತರಗಳನ್ನು ಈಡೇರಿಸುವ ಸೂಕ್ತ ವ್ಯಕ್ತಿಗಳಿಗೆ ಜಾತಿ ರಹಿತವಾಗಿ ಟಿಕೆಟ್ ನೀಡಬೇಕೆಂದರು. ಜಾತಿ ಆಧಾರದಲ್ಲಿ ಕೊಡಗಿನ ಜನತೆಯನ್ನು ಒಡೆಯುವ ಕೆಲಸಗಳು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿದ್ದು, ಸಾಮರಸ್ಯಕ್ಕೆ ಇದು ಧಕ್ಕೆಯನ್ನುಂಟು ಮಾಡುವ ಸಾಧ್ಯತೆ ಇದೆ. ಕೊಡಗಿನಲ್ಲಿ ಹುಟ್ಟಿ ಬೆಳೆದಿರುವ ಪ್ರತಿಯೊಬ್ಬರು ಕೊಡಗಿನ ಜನರಾಗಿದ್ದು, ರಾಷ್ಟ್ರ, ರಾಜ್ಯ , ಜಿಲ್ಲೆ, ನೆಲ, ಜಲ ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ತೋರುವ ವ್ಯಕ್ತಿಗಳಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ಜಾತಿ ಆಧಾರದಲ್ಲಿ ಮತ ಗಳಿಕೆಗೆ ಮತದಾರರ ಮನವೊಲಿಸುವ ಪ್ರಯತ್ನ ಜಿಲ್ಲೆಯಾದ್ಯಂತ ನಡೆಯುತ್ತಿದ್ದು, ಇದಕ್ಕೆ ಜನರು ಮರುಳಾಗದೆ ಜನಸೇವೆಯ ಆದ್ಯತೆಯ ವ್ಯಕ್ತಿಗಳಿಗೆ ಮತ ನೀಡಬೇಕೆಂದರು.

ಜ.21 ರಂದು ಬೆಳಗ್ಗೆ 8 ಗಂಟೆಗೆ ಕಾವೇರಿ ನದಿಯ ಉಗಮ ಸ್ಥಾನವಾದ ತಲಕಾವೇರಿಯಿಂದ ಮಡಿಕೇರಿಯ ಶ್ರೀ ಓಂಕಾರೇಶ್ವರ ದೇವಸ್ಥಾನದವರೆಗೆ ತಮ್ಮ ನೇತೃತ್ವದಲ್ಲಿ ಜನಪರ ಹೋರಾಟ ಸಮಿತಿ ವತಿಯಿಂದ ಪಾದಯಾತ್ರೆ ನಡೆಸಲಾಗುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜನಪರ ಹೋರಾಟ ಸಮಿತಿಯ ಖಜಾಂಚಿ ಧನಂಜಯ್ ಹಾಗೂ ಸದಸ್ಯ ಸೋಮೇಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X