ಶಿವಮೊಗ್ಗ: ಅಕ್ರಮ ಕಲ್ಲು ಗಣಿಗಾರಿಕೆ; ವಾಹನಗಳ ವಶ
ಶಿವಮೊಗ್ಗ, ಮಾ. 15: ಯಾವುದೇ ಪರವಾನಿಗೆಯಿಲ್ಲದೆ ಕಾನೂನುಬಾಹಿರವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿ, ವಾಹನಗಳನ್ನು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಮಸಗಲ್ಲಿ ಗ್ರಾಮದಲ್ಲಿ ನಡೆದಿದೆ.
ಖಚಿತ ವರ್ತಮಾನದ ಮೇರೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಪೊಲೀಸರ ನೆರವಿನೊಂದಿಗೆ ದಾಳಿ ನಡೆಸಿದ್ದಾರೆ. ಈ ವೇಳೆ ಕಲ್ಲು ಗಣಿಗಾರಿಕೆಯಲ್ಲಿ ತೊಡಗಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ.
ಸ್ಥಳದಲ್ಲಿದ್ದ ಮೂರು ಲಾರಿ, ಕಂಪ್ರೆಸ್ಸರ್ ಯಂತ್ರ, ಟ್ರ್ಯಾಕ್ಟರ್, ಕಲ್ಲುಗಳನ್ನು ವಶಕ್ಕೆ ಪಡೆಯಲಾಗಿದೆ. ಇವುಗಳ ಮಾರುಕಟ್ಟೆ ಮೌಲ್ಯ ಸುಮಾರು 15 ಲಕ್ಷ ರೂ.ಗೂ ಅಧಿಕವೆಂದು ಅಂದಾಜಿಸಲಾಗಿದೆ.
ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story