ಶಾಸಕಾಂಗ ಸಭೆಗೆ ಹಾಜರಾಗಲು ಕಾಂಗ್ರೆಸ್ ನ ಎಲ್ಲ ಶಾಸಕರಿಗೂ ನೋಟಿಸ್
ಬೆಂಗಳೂರು, ಫೆ.7: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶುಕ್ರವಾರ ನಡೆಯಲಿದ್ದು, ಸಭೆಗೆ ಪಕ್ಷದ ಎಲ್ಲ ಶಾಸಕರು ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶಾಸಕರಿಗೆ ಸಭೆಗೆ ಕಡ್ಡಾಯವಾಗಿ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಸಭೆಗೆ ಗೈರು ಹಾಜರಾಗುವ ಶಾಸಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
Next Story