ಹಿರಿಯ ಪತ್ರಕರ್ತ ಎಚ್.ಎಸ್.ರಾಮಣ್ಣ ನಿಧನ
ತುಮಕೂರು,ಮಾ.5: ಹಿರಿಯ ಪತ್ರಕರ್ತ ಎಚ್.ಎಸ್.ರಾಮಣ್ಣ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 67 ವಯಸ್ಸಾಗಿತ್ತು.
ನಗೆಮುಗುಳು ಹಾಸ್ಯ ಮಾಸಪತ್ರಿಕೆ ಸಂಪಾದಕರಾಗಿದ್ದ ರಾಮಣ್ಣ ವಿವಿಧ ಪತ್ರಿಕೆ, ಮಾಧ್ಯಮಗಳಲ್ಲಿ ಸೇವೆ ಸಲ್ಲಿಸಿದ್ದರು. ಪತ್ರಿಕಾ ರಂಗದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದ ಎಚ್.ಎಸ್.ರಾಮಣ್ಣ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ನಾಳೆ ತುಮಕೂರಿನಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
Next Story