ರಾಜ್ಯದ 39 ಪೊಲೀಸರಿಗೆ ರಾಷ್ಟ್ರಪತಿ ಪದಕ
ಬೆಂಗಳೂರು, ಆ.14: ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸರಿಗೆ ನೀಡಲಾಗುವ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಹಾಗೂ ಶ್ಲಾಘನೀಯ ಸೇವಾ ಪದಕಕ್ಕೆ ರಾಜ್ಯದ 39 ಪೊಲೀಸರು ಭಾಜನರಾಗಿದ್ದಾರೆ.
ಚಿಕ್ಕಮಗಳೂರಿನ ಪೊಲೀಸ್ ಉಪ ಅಧೀಕ್ಷಕ ಬಸಪ್ಪಅಂಗಡಿ ಅವರಿಗೆ ವಿಶಿಷ್ಟ ಸೇವಾ ಪದಕ ಲಭಿಸಿದ್ದು, ಉಳಿದ 38 ಪೊಲೀಸರಿಗೆ ಶ್ಲಾಘನೀಯ ಸೇವಾ ಪದಕ ಲಭಿಸಿದೆ ಎಂದು ಪ್ರಕಟನೆ ತಿಳಿಸಿದೆ.
Next Story