Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಾಮುಂಡಿ ಬೆಟ್ಟದ ಫುಟ್ಪಾತ್ ವ್ಯಾಪಾರಿಗಳ...

ಚಾಮುಂಡಿ ಬೆಟ್ಟದ ಫುಟ್ಪಾತ್ ವ್ಯಾಪಾರಿಗಳ ತಕ್ಷಣ ತೆರವಿಗೆ ಸಚಿವ ವಿ.ಸೋಮಣ್ಣ ಸೂಚನೆ

ವಾರ್ತಾಭಾರತಿವಾರ್ತಾಭಾರತಿ10 Sept 2019 12:30 PM IST
share
ಚಾಮುಂಡಿ ಬೆಟ್ಟದ ಫುಟ್ಪಾತ್ ವ್ಯಾಪಾರಿಗಳ ತಕ್ಷಣ ತೆರವಿಗೆ ಸಚಿವ ವಿ.ಸೋಮಣ್ಣ ಸೂಚನೆ

ಮೈಸೂರು, ಸೆ.10: ಚಾಮುಂಡಿ ಬೆಟ್ಟದ ಫುಟ್ಪಾತ್ ವ್ಯಾಪಾರಿಗಳನ್ನು ತಕ್ಷಣ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ವಸತಿ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ವಿ.ಸೋಮಣ್ಣ ಖಡಕ್ ಸೂಚನೆ ನೀಡಿದ್ದಾರೆ.

ಅರಮನೆ ಆವರಣದಲ್ಲಿ ಅರಮನೆ ಮಂಡಳಿ ವತಿಯಿಂದ ಮಂಗಳವಾರ  ದಸರಾದಲ್ಲಿ ಭಾಗವಹಿಸಿರುವ ಮಾವುತರು ಮತ್ತು ಕಾವಾಡಿಗಳ ಕುಟುಂಬದವರಿಗೆ ಏರ್ಪಡಿಸಿದ್ದ ಉಪಹಾರ ಕೂಟದಲ್ಲಿ ಉಪಹಾರ ಬಡಿಸಿ ನಂತರ ನಡೆದ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡುತ್ತಿದ್ದರು.

ಚಾಮುಂಡಿ ಬೆಟ್ಟದಲ್ಲಿ ರಸ್ತೆ ಪಕ್ಕದಲ್ಲೇ ಅನಧಿಕೃತವಾಗಿ ವ್ಯಾಪಾರ ಮಾಡುತ್ತಿರುವುದರಿಂದ ಅಲ್ಲಿಗೆ ಬರುವ ಭಕ್ತಾಧಿಗಳಿಗೆ ತೊಂದರೆ ಉಂಟಾಗುತ್ತಿದೆ. ಜೊತೆಗೆ ರಸ್ತಯನ್ನೆಲ್ಲಾ ಅತಿಕ್ರಮಿಸಿಕೊಂಡು ಸುಂದರ ವಾತಾವರಣ ಹಾಳಾಗಿದೆ. ಭಕ್ತಾಧಿಗಳ ಅನುಕೂಲಕ್ಕೆ ತೊಂದರೆಯಾಗದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕಿದೆ. ಆದ್ದರಿಂದ ಅಲ್ಲಿನ ವ್ಯಾಪಾರಸ್ಥರನ್ನು ಕೂಡಲೇ ತರವುಗೊಳಿಸಿ ಎಂದು ಡಿಸಿಪಿ ಮುತ್ತುರಾಜ್ ಅವರಿಗೆ ಸಚಿವರು ಸೂಚಿಸಿದರು.

ಇನ್ನು ದಸರಾ ಹಿನ್ನೆಲೆಯಲ್ಲಿ ನಗರದಲ್ಲಿ ಕೈಗೊಳ್ಳಬೇಕಿರುವ ಕಾಮಗಾರಿಗಳ ಕುರಿತು ಪಾಲಿಕೆ ಆಯಕ್ತರಿಗೆ ಸೂಚನೆ ನೀಡಿದರು.

ಹಾಡಿಗಳ ಜನರು ವಿದ್ಯುತ್ ನಿಂದ ವಂಚಿತರಾಗಬಾರದು. ಆ ನಿಟ್ಟಿನಲ್ಲಿ ಅವರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವ್ಯವಸ್ಥೆ ಕೈಗೊಳ್ಳುವಂತೆ ಚೆಸ್ಕಾಂ ಧಿಕಾರಿಗಳಿಗೆ ಸೂಚಿಸಿದರು.

ಹಾಡಿಗಳಲ್ಲದೆ ಗ್ರಾಮೀಣ ಪ್ರದೇಶದ ಹಲವು ಮನೆಗಳಲ್ಲೂ ವಿದ್ಯುತ್ ಸಂಪರ್ಕ ಇಲ್ಲದ ಬಗ್ಗೆ ಮಾಧ್ಯಮದವರು ಸಚಿವರ ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಸಚಿವ ವಿ.ಸೋಮಣ್ಣ, ದಸರಾ ಮುಂಚಿತವಾಗಿ ಜಿಲ್ಲಾಮಟ್ಟದ ಕೆಡಿಪಿ ಸಭೆ ನಡೆಸಿ ಇಂತಹ ಅವ್ಯವಸ್ಥೆಗಳ ಬಗ್ಗೆ ಗಮನಹರಿಸಲಾಗುವುದು ಎಂದು ಹೇಳಿದರು.

ಅರಣ್ಯ ಇಲಾಖೆಯವರು ಆನೆಗಳ ಸುಗಮ ಸಂಚಾರಕ್ಕೆ ಪೊಲೀಸರೊಡಗೂಡಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದರು.

ಇದಕ್ಕೂ ಮುಂಚೆ ವಿ.ಸೋಮಣ್ಣ ಪ್ರತಿಷ್ಠಾನದ ವತಿಯಿಂದ ದಸರಾ ದರ್ಶನದಲ್ಲಿ ಭಾಗವಹಿಸುವರ ಬಳಿ 50 ರೂ. ಪಡೆಯಲಾಗುತಿತ್ತು. ಇದರಿಂದ 5.40 ಲಕ್ಷ ರೂ. ಖರ್ಚಾಗುತಿತ್ತು. ಆ ಹಣವನ್ನು ವಿ.ಸೋಮಣ್ಣ ಪ್ರತಿಷ್ಠಾನದ ವತಿಯಿಂದ ನೀಡುವುದಾಗಿ ಸೋಮಣ್ಣ ಅವರ ಪತ್ನಿ ಶೈಲಜಾ ಸೋಮಣ್ಣ ಅಪರ ಜಿಲ್ಲಾಧಿಕಾರಿಗೆ ಚೆಕ್ ನೀಡಿದರು.

ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಎಲ್‌. ನಾಗೇಂದ್ರ, ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಮ್, ಮೇಯರ್ ಪುಷ್ಪಲತಾ ಜಗನ್ನಾಥ್, ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ, ಎಸ್ಪಿ ರಿಷ್ಯಂತ್, ಜಿಪಂ ಸಿಇಓ ಕೆ.ಜ್ಯೋತಿ, ಬಿಜೆಪಿ ಜಿಲ್ಲಾಧ್ಯಕ್ಷ ಕೋಟೆ ಎಂ.ಶಿವಣ್ಣ, ನಗರಾಧ್ಯಕ್ಷ ಡಾ.ಮಂಜುನಾಥ್, ಜಿಪಂ ಸದಸ್ಯೆ ಮಂಗಳಾ ಸೋಮಶೇಖರ್, ಬಿಜೆಪಿ ಮುಖಂಡರಾದ ಎಸ್.ಮಹದೇವಯ್ಯ, ದೇವನೂರು ಜಿ. ಪ್ರತಾಪ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X