ಸ್ಕೇಟಿಂಗ್: ಗಿನ್ನಿಸ್ ದಾಖಲೆ ಬರೆದ ಹುಬ್ಬಳ್ಳಿ ಬಾಲೆ ಓಜಲ್ ಎಸ್. ನಲವಡಿ
ಹುಬ್ಬಳ್ಳಿ, ನ.14: ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಓಜಲ್ ಎಸ್. ನಲವಡಿ ಅವರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್ ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ, ಗಿನ್ನಿಸ್ ದಾಖಲೆ ಬರೆದಳು.
ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ನಡೆದ ಈ ಸಾಧನೆಯನ್ನು ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಿಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು.
ಖಾಸಗಿ ಕಂಪೆನಿಯ ಸಿಎಫ್ಒ ಆಗಿರುವ ಸುನೀಲ್ ಎಸ್. ನಲವಡಿ ಹಾಗೂ ದೀಪಾ ಎಸ್. ನಲವಡಿ ಅವರ ಪುತ್ರಿಯಾದ ಓಜಲ್, ಏಷ್ಯಾ ಬುಕ್ ಆಫ್ ರೆಕಾರ್ಡ್, ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದಂತೆ, ಇದುವರೆಗೆ ಒಟ್ಟು 13 ದಾಖಲೆಗಳನ್ನು ನಿರ್ಮಿಸಿದ್ದಾಳೆ.
ಓಜಲ್ ಗೆ ಅಕ್ಷಯ ಸೂರ್ಯವಂಶಿ ತರಬೇತಿ ನೀಡಿದ್ದರು.
Next Story