ಇರ್ಕಾನ್ನಿಂದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಫೆ.3: ಸರಕಾರಿ ಸ್ವಾಮ್ಯದ ಇರ್ಕಾನ್ ಇಂಟರ್ನ್ಯಾಷನಲ್ (IRCON) ಸಂಸ್ಥೆಯು, ವಿವಿಧ ರಾಜ್ಯಗಳಲ್ಲಿ 76 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್ ಅಥವಾ ಟೆಕ್ನಾಲಜಿ ವಿಷಯಗಳಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಜನವರಿ 1ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ಹಾಗೂ ಗರಿಷ್ಠ 30 ವರ್ಷ ವಯೋಮಿತಿ ನೀಡಲಾಗಿದ್ದು, ಮೀಸಲಾತಿ ಅನ್ವಯ ಸಡಿಲಿಕೆ ಇರಲಿದೆ.
ದಾಖಲೆಗಳ ಪರಿಶೀಲನೆ ಹಾಗೂ ಮೆರಿಟ್ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಕೆಗೆ ಫೆ.15 ರಂದು ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ https://bit.ly/37K7Eq7 ಅನ್ನು ನೋಡಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story