ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷ ವೆಂಕಟೇಶಮೂರ್ತಿ ಕಲಬುರಗಿಗೆ ಆಗಮನ
ಕಲಬುರಗಿ, ಫೆ.4: ಫೆ.5ರಿಂದ ಜರುಗಲಿರುವ ಎಂಬತ್ತೈದನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ. ಎಚ್.ಎಸ್. ವೆಂಕಟೇಶಮೂರ್ತಿ ಅವರು ಬೆಂಗಳೂರಿನಿಂದ ಉದ್ಯಾನ್ ಎಕ್ಸ್ಪ್ರೆಸ್ ರೈಲಿನ ಮೂಲಕ ಇಂದು ಬೆಳಗ್ಗೆ 8:45 ಗಂಟೆಗೆ ಕಲಬುರಗಿ ರೈಲು ನಿಲ್ದಾಣಕ್ಕೆ ಆಗಮಿಸಿದ್ದಾರೆ.
ರೈಲು ನಿಲ್ದಾಣದಲ್ಲಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಪುಷ್ಪಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ವಿರೇಂದ್ರ ಸಿಂಪಿ, ಗೌರಾವಾಧ್ಯಕ್ಷ ಮಡಿವಾಳಪ್ಪ, ಕಸಾಪ ಮಾಜಿ ಅಧ್ಯಕ್ಷ ಮಹಿಪಾಲ್ ರೆಡ್ಡಿ ಮುನ್ನೂರು ಉಪಸ್ಥಿತರಿದ್ದರು.
Next Story