ಕೊರೋನ ಸೋಂಕಿಗೆ ಮತ್ತೊಂದು ಬಲಿ: ರಾಜ್ಯದಲ್ಲಿ ಸಾವಿನ ಸಂಖ್ಯೆ 23ಕ್ಕೆ ಏರಿಕೆ
ದಾವಣಗೆರೆ, ಮೇ.1: ಕೊರೋನ ಸೋಂಕಿನಿಂದ ಬಳಲುತ್ತಿದ್ದ 69 ವರ್ಷದ ವೃದ್ಧರೊಬ್ಬರು ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೋನ ಸೋಂಕಿಗೆ ಬಲಿಯಾದವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.
ಜಾಲಿನಗರದ 69 ವರ್ಷದ ವ್ಯಕ್ತಿ (ರೋಗಿ.556) ತೀವ್ರ ಉಸಿರಾಟದ ತೊಂದರೆಯಿಂದಾಗಿ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಎಪ್ರಿಲ್ 28ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಅವರ ಗಂಟಲಿನ ದ್ರವದ ಮಾದರಿಯನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಬುಧವಾರ ಅವರಿಗೆ ಕೊರೋನ ಇರುವ ಬಗ್ಗೆ ದೃಢಪಡಿಸಿತ್ತು. ಆದರೆ, ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಒಂದೇ ದಿನ 24 ಪ್ರಕರಣಗಳು
ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 24 ಮಂದಿಗೆ ಕೊರೋನ ಪಾಸಿಟಿವ್ ಬಂದಿದ್ದು, ಸೋಂಕಿತರ ಸಂಖ್ಯೆ 589ಕ್ಕೆ ಏರಿದೆ. ಈ ಪೈಕಿ 251 ಮಂದಿ ಗುಣಮುಖರಾಗಿದ್ದು, 23 ಮಂದಿ ಸಾವನ್ನಪ್ಪಿದ್ದಾರೆ.
Next Story