ಹಾಸನ ಜಿಲ್ಲೆಯಲ್ಲಿಂದು 31 ಕೊರೋನ ಪಾಸಿಟಿವ್, ಒಂದು ಸಾವು: ಡಿಹೆಚ್ಓ ಡಾ.ಸತೀಶ್
ಹಾಸನ: ಜಿಲ್ಲೆಯಲ್ಲಿ ಹೊಸದಾಗಿ 31 ಕೊರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಒಂದು ಸಾವು ಸಂಭವಿಸಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ತಿಳಿಸಿದ್ದಾರೆ.
ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಇದುವರೆಗೆ 515 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 232 ಜನ ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 24 ಮಂದಿ ಕೊರೋನ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದರು.
ಹೊಸದಾಗಿ ಇಂದು ಪತ್ತೆಯಾದ 31 ಪ್ರಕರಣಗಳಲ್ಲಿ 16 ಜನ ಹಾಸನ ತಾಲೂಕಿಗೆ ಸೇರಿದವರಾಗಿದ್ದಾರೆ, 3 ಜನ ಚನ್ನರಾಯಪಟ್ಟಣ ತಾಲೂಕಿಗೆ ಸೇರಿದ್ದು, ಸಕಲೇಶಪುರ ತಾಲೂಕಿಗೆ 6 ಜನ ಸೇರಿದವರಾಗಿದ್ದಾರೆ. ಕೊರೋನ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಸುರಕ್ಷಿತ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಮಾಸ್ಕ್ ಹಾಕಿಕೊಂಡು ಕೊರೋನ ಸೋಂಕು ತಡೆಗಟ್ಟುವಲ್ಲಿ ಸಹಕರಿಸಬೇಕು ಮನವಿ ಮಾಡಿದ್ದಾರೆ.
Next Story