ಸಿಎಂ ಯಡಿಯೂರಪ್ಪರಿಗೆ ಕೊರೋನ ಪಾಸಿಟಿವ್
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಈ ವಿಚಾರವನ್ನು ಅವರು ಟ್ವಿಟರ್ ಮೂಲಕ ತಿಳಿಸಿದ್ದಾರೆ.
“ನನ್ನ ಕೊರೋನ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.
— B.S. Yediyurappa (@BSYBJP) August 2, 2020
Next Story