ಶೀಘ್ರ ಗುಣಮುಖರಾಗಿ: ಸಿದ್ದರಾಮಯ್ಯ ಅವರಿಗೆ ಶುಭ ಹಾರೈಸಿದ ರಾಹುಲ್ ಗಾಂಧಿ
ಕೊರೋನ ಪಾಸಿಟಿವ್
ಬೆಂಗಳೂರು, ಆ. 9: ಕೊರೋನ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗುವಂತೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿವರು, ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶುಭ ಹಾರೈಸಿದ್ದಾರೆ.
ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರೊಂದಿಗೆ ರವಿವಾರ ದೂರವಾಣಿ ಮೂಲಕ ಮಾತನಾಡಿದ ರಾಹುಲ್ ಗಾಂಧಿಯವರು ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದರು. ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೂ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
Next Story