ಕಟ್ಟು ಕಥೆ ಕಟ್ಟುವುದರಲ್ಲಿ ಕಾಂಗ್ರೆಸ್ಸಿಗರು ಎತ್ತಿದ ಕೈ: ಬಿ.ವೈ.ವಿಜಯೇಂದ್ರ
ಬೆಂಗಳೂರು, ಆ.26: ಕಟ್ಟು ಕಥೆ ಕಟ್ಟುವುದರಲ್ಲಿ, ಹಸೀ ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ಸಿಗರು ಎತ್ತಿದ ಕೈ, ನನ್ನನ್ನು ಗುರಿಯಾಗಿಸಿಕೊಂಡು ಮೈಸೂರಿನಲ್ಲಿಂದು ಇಂಥದ್ದೇ ಒಂದು ಹಾಸ್ಯಾಸ್ಪದವಾದ ಜೊಳ್ಳು ಆರೋಪವನ್ನು ಮಾಡಲಾಗಿದೆ. ದುರುದ್ದೇಶಪೂರಿತ, ರಾಜಕೀಯ ಪಿತೂರಿಯ ಆರೋಪಗಳಿಗೆ ನಾನೆಂದೂ ಬೆನ್ನು ತೋರುವುದಿಲ್ಲ. ಅಪಪ್ರಚಾರಗಳು ನನ್ನ ನೈತಿಕ ಸ್ಥೈರ್ಯ ಕುಂದಿಸದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
Next Story