ಹನೂರು: ವಿದ್ಯುತ್ ತಂತಿ ತಗಲಿ ಗಂಡಾನೆ ಸಾವು
ಹನೂರು: ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹನೂರು ತಾಲೂಕಿನ ಪಿ.ಜಿ ಪಾಳ್ಯ ವಲಯ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ತಗಲಿ ಗಂಡಾನೆಯೊಂದು ಮೃತಪಟ್ಟ ಘಟನೆ ನಡೆದಿದೆ.
ತಾಲೂಕಿನ ಸಿರಗೋಡು ಸಮೀಪದ ಕೃಷಿ ಜಮೀನೊಂದರಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಈ ಗಂಡು ಆನೆಗೆ ಸುಮಾರು 30 ವರ್ಷವಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಅಂದಾಜಿಸಿದ್ದಾರೆ.
ಜಮೀನಿನಲ್ಲಿ ಬೆಳೆದ ಬೆಳೆಯ ರಕ್ಷಣೆಗಾಗಿ ರೈತನೊಬ್ಬ ತನ್ನ ಜಮೀನಿನ ಸುತ್ತಲೂ ತಂತಿಬೇಲಿ ಅಳವಡಿಸಿ, ಅದಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ನೀಡಿದ್ದ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story