ಮಂಡ್ಯ ಜಿಲ್ಲೆಯಲ್ಲಿ ಡ್ರಗ್ಸ್ ದಂಧೆ ಇಲ್ಲ: ಎಸ್ಪಿ ಪರಶುರಾಮ್ ಸ್ಪಷ್ಟನೆ
ಮಂಡ್ಯ, ಸೆ.4: ಜಿಲ್ಲೆಯಲ್ಲಿ ಡ್ರಗ್ಸ್ ದಂಧೆ ಇಲ್ಲ. ಆದರೆ, ಗಾಂಜಾ ಮಾರಾಟ ಪ್ರಕರಣಗಳು ಸಿಕ್ಕಿವೆ ಎಂದು ಎಸ್ಪಿ ಪರಶುರಾಮ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ 43 ಗಾಂಜಾ ಪ್ರಕರಣಗಳು ಪತ್ತೆಯಾಗಿದ್ದು, 5145 ಕೆಜಿ ಗಾಂಜಾವನ್ನು ಸೀಝ್ ಮಾಡಿದ್ದೇವೆ. 64 ಮಂದಿ ಆರೋಪಿಗಳನ್ನು ಬಂಧಿಸಿದ್ದೇವೆ ಎಂದರು.
ಜಿಲ್ಲೆಯಲ್ಲಿ ಡ್ರಗ್ಸ್ ಸಿಗುತ್ತಿದೆ ಎಂದು ಮಾಜಿ ಸಂಸದ ಶಿವರಾಮೇಗೌಡ ಹಾಗೂ ಶಾಸಕ ಡಿ.ಸಿ.ತಮ್ಮಣ್ಣ ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು ಎಂದು ಅವರು ಸ್ಪಷ್ಟಪಡಿಸಿದರು.
Next Story