ದ್ವಿತಿಯ ಪಿಯುಸಿ ಪೂರಕ ಪರೀಕ್ಷಾರ್ಥಿಗಳಿಗೆ ಉಚಿತ ಪ್ರಯಾಣ ವ್ಯವಸ್ಥೆ
ಬೆಂಗಳೂರು, ಸೆ. 5: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಸೆ.7 ರಿಂದ 19ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಸಾರ್ಟಿಸಿ) ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ಕಲ್ಪಿಸಿದೆ.
ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ತೆರಳಲು ಮತ್ತು ಹಿಂದಿರುಗಲು ದ್ವಿತಿಯ ಪಿಯುಸಿ ಪೂರಕ ಪರೀಕ್ಷೆ ಪ್ರವೇಶನವನ್ನು ತೋರಿಸಿ ಕೆಎಸ್ಸಾರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್ಸಾರ್ಟಿಸಿ ಅಧಿಕೃತ ಪ್ರಕಟಣೆ ತಿಳಿಸಿದೆ.
Next Story