ವೈದ್ಯರು, ಆರೋಗ್ಯ ಸಿಬ್ಬಂದಿಯಲ್ಲಿ ದೇವರನ್ನು ಕಂಡೆ: ನಳೀನ್ ಕುಮಾರ್ ಕಟೀಲು
ಬೆಂಗಳೂರು, ಸೆ.7: ನಾನು ಭಗವಂತನನ್ನು ಕಣ್ಣಾರೆ ನೋಡಿದವನಲ್ಲ. ಆದರೆ ತಮ್ಮ ಅಮೂಲ್ಯ ಪ್ರಾಣವನ್ನು ಪಣಕ್ಕಿಟ್ಟು ನಮ್ಮ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಲ್ಲಿ, ದಾದಿಯರಲ್ಲಿ, ಆರೋಗ್ಯ ಸಿಬ್ಬಂದಿಯಲ್ಲಿ ದೇವರನ್ನು ಕಂಡೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೊರೋನ ಸೋಂಕಿಗೆ ಒಳಗಾಗಿ ಕಳೆದ ಆ.30 ರಂದು ಆಸ್ಪತ್ರೆಗೆ ದಾಖಲಾಗಿದ್ದ ಕಟೀಲು ಅವರು, ತಮ್ಮ ಸೇವೆ ಮಾಡಿರುವ ವೈದ್ಯರು, ದಾದಿಯರು ಹಾಗೂ ಆರೋಗ್ಯ ಸಿಬ್ಬಂದಿಯ ಪರಿಶ್ರಮವನ್ನು ಶ್ಲಾಘಿಸಿದ್ದಾರೆ.
ಕಟೀಲು ದುರ್ಗಾಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಯ ಫಲವಾಗಿ ಕೊರೋನ ಕಾಯಿಲೆಯಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲವು ದಿನಗಳ ತನಕ ಕ್ವಾರಂಟೈನ್ನಲ್ಲಿ ಇರಲು ವೈದ್ಯರು ಸಲಹೆ ನೀಡಿದ್ದಾರೆ ಎಂದು ನಳಿನ್ ಕುಮಾರ್ ತಿಳಿಸಿದ್ದಾರೆ.
Next Story