ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣರಿಗೆ ಕೊರೋನ ಸೋಂಕು ದೃಢ
ಬೆಂಗಳೂರು, ಸೆ.19: ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ ಅವರಿಗೆ ಶನಿವಾರ ಕೊರೋನ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅಶ್ವತ್ಥನಾರಾಯಣ ಅವರು, ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಅವರು ಮನವಿ ಮಾಡಿದ್ದಾರೆ.
Next Story