ಮಂಡ್ಯ, ಸೆ.20: ಯುವಕನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ತಾಲೂಕಿನ ಹೊಡಾಘಟ್ಟ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಗ್ರಾಮದ ಪೂಜಾರಿ ಮಂಜಣ್ಣ ಎಂಬವರ ಪುತ್ರ ಅಭಿಷೇಕ್ (25)ಕೊಲೆಯಾಗಿರುವ ಯುವಕ.
ಪೊಲೀಸ್ ಅಧಿಕಾರಿಗಳು, ಶ್ವಾನದಳದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೆರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.