ಶಿರಾ, ಆರ್.ಆರ್.ನಗರ ಉಪ ಚುನಾವಣೆ ಕದನ: ‘ಕೈ’ ಅಭ್ಯರ್ಥಿಗಳ ಘೋಷಣೆ
ಬೆಂಗಳೂರು, ಅ.7: ಆರ್.ಆರ್.ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಕ್ಷಕ್ಕೆ ಇತ್ತೀಚೆಗಷ್ಟೇ ಸೇರ್ಪಡೆಯಾದ ಕುಸುಮಾ(ಐಎಎಸ್ ಅಧಿಕಾರಿಯಾಗಿದ್ದ ಡಿ.ಕೆ.ರವಿ ಅವರ ಪತ್ನಿ) ಅವರಿಗೆ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡಲಾಗಿದೆ.
ಇನ್ನು ಹಾಲಿ ಶಾಸಕ ಸತ್ಯನಾರಾಯಣ ನಿಧನದಿಂದ ತೆರವಾಗಿರುವ ಶಿರಾ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ಟಿ.ಬಿ.ಜಯಚಂದ್ರಗೆ ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ಅವಕಾಶ ಕಲ್ಪಿಸಿದೆ. ಇತ್ತೀಚೆಗೆ ಕಾಂಗ್ರೆಸ್ ಹಿರಿಯ ಮುಖಂಡರ ಸಭೆಯಲ್ಲಿ ಕುಸುಮಾ ಹಾಗೂ ಟಿ.ಬಿ.ಜಯಚಂದ್ರ ಹೆಸರನ್ನು ಅಂತಿಮಗೊಳಿಸಿ ಕಾಂಗ್ರೆಸ್ ಹೈಕಮಾಂಡ್ಗೆ ಶಿಫಾರಸ್ಸು ಮಾಡಲಾಗಿತ್ತು.
ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಆದೇಶ ಮೇರೆಗೆ ಕುಸುಮಾ ಹಾಗೂ ಟಿ.ಬಿ.ಜಯಚಂದ್ರ ಅವರನ್ನು ಉಪ ಚುನಾವಣೆಯ ಅಭ್ಯರ್ಥಿಗಳನ್ನಾಗಿ ಘೋಷಿಸಿ ಪಕ್ಷದ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಘೋಷಿಸಿದ್ದಾರೆ.
Next Story