ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ ಪ್ರಕರಣ: ಮತ್ತೊಮ್ಮೆ ನಟಿಯರ ವಿಚಾರಣೆ ಸಾಧ್ಯತೆ
ಬೆಂಗಳೂರು, ಅ.11: ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿ ನಟಿಯರಾದ ರಾಗಿಣಿ ಮತ್ತು ಸಂಜನಾ ಅನ್ನು ಐಟಿ ತನಿಖಾಧಿಕಾರಿಗಳು ಮತ್ತೇ ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ.
ನಟಿಯರ ಆದಾಯ ಮೂಲ ಯಾವುದು ಒಟ್ಟು ಆಸ್ತಿ ಎಷ್ಟಿದೆ. ಹೊಂದಿರುವ ಆಸ್ತಿಗೆ ತಕ್ಕಂತೆ ಆದಾಯ ತೆರಿಗೆ ಕಟ್ಟಿದ್ದಾರೆಯೇ ಎಂಬ ಇತ್ಯಾದಿ ಮಾಹಿತಿಗಳನ್ನು ತನಿಖೆಗಳು ಪಡೆಯಲಿದ್ದಾರೆ ಎನ್ನಲಾಗಿದೆ.
ಈಗಾಗಲೇ ಇಡಿ ಅಧಿಕಾರಿಗಳು ಈ ಇಬ್ಬರು ನಟಿಯರನ್ನು ವಿಚಾರಣೆಗೆ ಒಳಪಡಿಸಿ ಅವರ ಆದಾಯ, ವಹಿವಾಟು ಮಂತಾದವುಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿದ್ದು, ಇದೀಗ ಮತ್ತೊಮ್ಮೆ ವಿಚಾರಣೆಗೆ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
Next Story