ಶಿರಾ, ಆರ್.ಆರ್ ನಗರ ಉಪಚುನಾವಣೆ: ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ
ಬೆಂಗಳೂರು, ಅ.13: ನವೆಂಬರ್ 3ರಂದು ನಡೆಯಲಿರುವ ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರ ಮತ್ತು ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯು ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾದ ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪನವರ ಪುತ್ರ ಡಾ.ರಾಜೇಶ್ ಗೌಡ ಅವರಿಗೆ ಶಿರಾ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಅನ್ನು ಅನರ್ಹ ಶಾಸಕ ಮುನಿರತ್ನ ಅವರಿಗೆ ನೀಡಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ.
Next Story