ಮೋದಿಗೆ ಕನ್ನಡಿಗರೆಂದರೆ ಇಷ್ಟವಿಲ್ಲವೇ, ಅಥವಾ ಬಿಎಸ್ವೈ ಇಷ್ಟವಿಲ್ಲವೇ: ಪ್ರಿಯಾಂಕ್ ಖರ್ಗೆ ಪ್ರಶ್ನೆ
ಬೆಂಗಳೂರು, ಅ.16: ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ರಾಜ್ಯವನ್ನು ನಿರ್ಲಕ್ಷಿಸುತ್ತಿದೆ ಎಂದು ಟೀಕಿಸಿರುವ ಶಾಸಕ ಪ್ರಿಯಾಂಕ್ ಖರ್ಗೆ, ಪ್ರಧಾನಿ ನರೇಂದ್ರ ಮೋದಿಗೆ ಕನ್ನಡಿಗರೆಂದರೆ ಇಷ್ಟವಿಲ್ಲವೇ ಅಥವಾ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರೆಂದರೆ ಇಷ್ಟವಿಲ್ಲವೇ ಎಂದು ಕುಟುಕಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನೆರೆ ಪೀಡಿತ ಆಂಧ್ರಪ್ರದೇಶ ಹಾಗೂ ತೆಲಂಗಾಣ ಸರಕಾರದ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಟ್ವೀಟ್ ಮೂಲಕ ಭರವಸೆ ನೀಡಿದ್ದಾರೆ. ಕರ್ನಾಟಕದಲ್ಲೂ ಭಾರೀ ಮಳೆಯಿಂದಾಗಿ ಸಾಕಷ್ಟು ನಷ್ಟ ಸಂಭವಿಸಿದೆ. ಜನತೆ ಪರಿಹಾರಕ್ಕಾಗಿ ಒತ್ತಾಯಿಸುತ್ತಿದ್ದಾರೆ. ಆದರೂ ಪ್ರಧಾನಿ ಮೋದಿ ಕರ್ನಾಟಕಕ್ಕೆ ಪರಿಹಾರ ನೀಡುವುದಕ್ಕೆ ಸಂಬಂಧಿಸಿದಂತೆ ಯಾಕೆ ಮೌನ ವಹಿಸಿದ್ದಾರೆ. ಇದು ತಾರತಮ್ಯ ನೀತಿಯಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.
Next Story