ಶನಿವಾರ ನಾಡಹಬ್ಬ ದಸರಾ ಉತ್ಸವಕ್ಕೆ ಚಾಲನೆ: ಮೈಸೂರಿಗೆ ತೆರಳಿದ ಸಿಎಂ
ಬೆಂಗಳೂರು, ಅ.16: ನಾಡಹಬ್ಬ ಮೈಸೂರು ದಸರಾ ಉತ್ಸವದ ಉದ್ಘಾಟನೆಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶುಕ್ರವಾರ ಸಂಜೆ 5.30ಕ್ಕೆ ಎಚ್ಎಎಲ್ ವಿಮಾನ ನಿಲದ್ದಾಣದಿಂದ ವಿಶೇಷ ವಿಮಾನದ ಮೂಲಕ ಸಾಂಸ್ಕೃತಿಕ ರಾಜಧಾನಿ ಮೈಸೂರಿಗೆ ಪ್ರಯಾಣ ಬೆಳೆಸಿದರು.
ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಕೊರೋನ ನಿಯಂತ್ರಣ ಕುರಿತು ಸಭೆ ನಡೆಸಿದ ಮುಖ್ಯಮಂತ್ರಿ, ಆನಂತರ ನಾಡಹಬ್ಬ ದಸರಾ ಆಚರಣೆಗೆ ಸಂಬಂಧಿಸಿದ ವಿಷಯಗಳ ಕುರಿತು ಸಭೆ ನಡೆಸಿದರು.
ಶನಿವಾರ ಬೆಳಗ್ಗೆ 7.45ಕ್ಕೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ಪೂಜೆಯೊಂದಿಗೆ ದಸರಾ ಉತ್ಸವದ ಉದ್ಘಾಟನೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗಿಯಾಗಲಿದ್ದಾರೆ. ನಂತರ ಬೆಳಗ್ಗೆ 10 ಗಂಟೆಗೆ ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ಹೊರಟು 10.35 ಕ್ಕೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
Next Story